Free Driving Training in Karnataka 2023-24
Free Driving Training in Karnataka 2023-24 ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ, ಕೇಂದ್ರ ಕಛೇರಿ, ಬೆಂಗಳೂರು ಡ್ರೈವಿಂಗ್ ಕೌಶಲ್ಯಗಳು, ವೈಯಕ್ತಿಕ ವಿಶ್ವಾಸ ಮತ್ತು ಸಾಮಾಜಿಕ ಸಾಮರ್ಥ್ಯದ ಪ್ರಮುಖ ಅಂಶವಾಗಿದೆ, ಪ್ರಾವೀಣ್ಯತೆಯನ್ನು ಪಡೆಯಲು ಮತ್ತು ಸಾಮಾಜಿಕ ಸಬಲೀಕರಣಕ್ಕೆ ಕೊಡುಗೆ ನೀಡಲು ಬಹುಮುಖಿ ಸಾಧನವಾಗಿ ಕಾರ್ಯನಿರ್ವಹಿಸುತ್ತದೆ. ಜನರು ವಾಹನ ನಿರ್ವಹಣೆಯ ಕೌಶಲ್ಯಗಳನ್ನು ಪಡೆದುಕೊಳ್ಳುವ ಅಗತ್ಯತೆಯ ಹೊರತಾಗಿಯೂ, ಹಲವಾರು ಸಾಮಾಜಿಕ-ಆರ್ಥಿಕ ನಿರ್ಬಂಧಗಳ ಕಾರಣದಿಂದಾಗಿ ಗಮನಾರ್ಹ ಸಂಖ್ಯೆಯ ಜನರು ಅದನ್ನು ಸವಾಲಾಗಿ ಪರಿಗಣಿಸುತ್ತಾರೆ. ಸುರಕ್ಷಿತ ಸಾರಿಗೆಯನ್ನು ಖಚಿತಪಡಿಸಿಕೊಳ್ಳುವುದು ಮತ್ತು ತರಬೇತಿಗೆ ಅವಕಾಶವನ್ನು ಒದಗಿಸುವುದು ಅತ್ಯುನ್ನತವಾಗಿದೆ, ಮತ್ತು ಈ ಉಪಕ್ರಮವು ಅಂತರವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ, ಸುರಕ್ಷಿತ ಮತ್ತು ಜವಾಬ್ದಾರಿಯುತ ಚಾಲನಾ ಅಭ್ಯಾಸಗಳಿಗೆ ಅಗತ್ಯವಿರುವ ಜ್ಞಾನ ಮತ್ತು ಕೌಶಲ್ಯಗಳೊಂದಿಗೆ ವ್ಯಕ್ತಿಗಳನ್ನು ಸಬಲೀಕರಣಗೊಳಿಸುತ್ತದೆ.
ಕರ್ನಾಟಕದಲ್ಲಿ ಉಚಿತ ವಾಹನ ಡ್ರೈವಿಂಗ್ ತರಬೇತಿ 2023-24
Free Driving Training in Karnataka 2023-24 ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್.ಸಿ.ಎಸ್.ಪಿ) ಹಾಗೂ ಗಿರಿಜನ ಉಪ ಯೋಜನೆ (ಟಿ.ಎಸ್.ಪಿ) ಯೋಜನೆಯಡಿ ಪರಿಶಿಷ್ಟ ಜಾತಿ(ಎಸ್.ಸಿ) ಮತ್ತು ಪರಿಶಿಷ್ಟ ಪಂಗಡ(ಎಸ್.ಟಿ)ಗಳ ಅಭ್ಯರ್ಥಿಗಳಿಗೆ ಉಚಿತವಾಗಿ ಲಘು ಮತ್ತು ಭಾರಿ ವಾಹನ ಚಾಲನ ತರಬೇತಿ ನೀಡಿ ಪ್ರಾದೇಶಿಕ ಸಾರಿಗೆ ಕಛೇರಿಯಿಂದ ಚಾಲನ ಅನುಜ್ಞಾಪತ್ರ/ಬ್ಯಾಡ್ಜ್ ನೀಡುವ ಕಾರ್ಯಕ್ರಮವನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿರುತ್ತದೆ. ಸದರಿ ತರಬೇತಿಯನ್ನು ಪಡೆಯಲು ಇಚ್ಚಿಸುವ ಪರಿಶಿಷ್ಟ ಜಾತಿ(ಎಸ್.ಸಿ) ಮತ್ತು ಪರಿಶಿಷ್ಟ ಪಂಗಡ(ಎಸ್.ಟಿ)ಗಳ ಅಭ್ಯರ್ಥಿಗಳು ಹೊಂದಿರಬೇಕಾದ ಕನಿಷ್ಠ ಅರ್ಹತೆಗಳು/ ಸಲ್ಲಿಸಬೇಕಾಗಿರುವ ದಾಖಲಾತಿಗಳ ವಿವರ ಕೆಳಕಂಡಂತೆ ಇರುತ್ತದೆ.
ಲಘು ವಾಹನ ಚಾಲನಾ ತರಬೇತಿ (ಕಾರ್/ಜೀಪ್):
- ಕನಿಷ್ಠ 18 ವರ್ಷ ವಯೋಮಿತಿ ತುಂಬಿರಬೇಕು.
- ಗರಿಷ್ಠ: 45 ವರ್ಷ
- (ವಯೋಮಿತಿಯನ್ನು ಅರ್ಜಿಸಲ್ಲಿಸಲು ನಿಗಧಿ ಪಡಿಸಿರುವ ಕೊನೆಯ ದಿನಾಂಕಕ್ಕೆ ಪರಿಗಣಿಸಲಾಗುವುದು).
ಬೇಕಾಗುವ ದಾಖಲೆಗಳು
- ಜನ್ಮ ದಿನಾಂಕದ ಬಗ್ಗೆ ಜನನ ಪ್ರಮಾಣಪತ್ರ ಅಥವಾ
- ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಅಥವಾ
- ಶಾಲಾ ವರ್ಗಾವಣಾ ಪ್ರಮಾಣ ಪತ್ರ ಅಥವಾ
- ನೋಟರಿಯಿಂದ ಪ್ರಮಾಣ ಪತ್ರ.
- ಆಧಾರ್ ಕಾರ್ಡ್,
- ಜಾತಿ ಪ್ರಮಾಣ ಪತ್ರ.
- ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ-5.
ಭಾರಿ ವಾಹನ ಚಾಲನಾ ತರಬೇತಿ (ಬಸ್):
- ಕನಿಷ್ಠ 20 ವರ್ಷಗಳ ವಯೋಮಿತಿ ಪೂರ್ಣಗೊಂಡಿರಬೇಕು.
- ಗರಿಷ್ಠ: 45 ವರ್ಷ
- (ವಯೋಮಿತಿಯನ್ನು ಅರ್ಜಿಸಲ್ಲಿಸಲು ನಿಗಧಿ ಪಡಿಸಿರುವ ಕೊನೆಯ ದಿನಾಂಕಕ್ಕೆ ಪರಿಗಣಿಸಲಾಗುವುದು).
ಲಘು ವಾಹನ ಚಾಲನಾ ಅನುಜ್ಞಾಪತ್ರ ಪಡೆದು ಒಂದು ವರ್ಷ ಪೂರ್ಣಗೊಂಡಿರಬೇಕು.
ಬೇಕಾಗುವ ದಾಖಲೆಗಳು
- ಜನ್ಮ ದಿನಾಂಕದ ಬಗ್ಗೆ ಜನನ ಪ್ರಮಾಣಪತ್ರ ಅಥವಾ
- ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಅಥವಾ
- ಶಾಲಾ ವರ್ಗಾವಣಾ ಪ್ರಮಾಣ ಪತ್ರ ಅಥವಾ
- ನೋಟರಿಯಿಂದ ಪ್ರಮಾಣ ಪತ್ರ.
- ಆಧಾರ್ ಕಾರ್ಡ್,
- ಜಾತಿ ಪ್ರಮಾಣ ಪತ್ರ.
- ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ-5.
* ಮೊದಲು ಬಂದವರಿಗೆ ಮೊದಲ ಆದ್ಯತೆಯ ಮೇರೆಗೆ ಅರ್ಹ ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ಲಘು/ಭಾರಿ ವಾಹನ ಚಾಲನಾ ತರಬೇತಿ (30 ದಿನಗಳು) ಮತ್ತು ತರಬೇತಿಯ ಅವಧಿಯಲ್ಲಿ ವಸತಿ ಮತ್ತು ಊಟೋಪಚಾರದ ವ್ಯವಸ್ಥೆಯನ್ನು ಉಚಿತವಾಗಿ ನೀಡಲಾಗುತ್ತದೆ
ಮೇಲಿನ ಅರ್ಹತೆ ಹೊಂದಿದ್ದು, ಆಸಕ್ತಿ ಇರುವ ಪರಿಶಿಷ್ಟ ಜಾತಿ/ಪಂಗಡದ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆ ಮತ್ತು 02 ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ, 3ನೇ ಮಹಡಿ, ಶಾಂತಿನಗರ ಬಸ್ ನಿಲ್ದಾಣ. ಬೆಂಗಳೂರು-560027 ಇಲ್ಲಿ ದಿನಾಂಕ:31.01.2024 ರವರೆಗೆ ಹೆಸರು ನೋಂದಾಯಿಸಿಕೊಳ್ಳಬಹುದಾಗಿರುತ್ತದೆ.
Free Driving Training in Karnataka 2023-24 ಹೆಚ್ಚಿನ ಮಾಹಿತಿಗಾಗಿ
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆಗಳು
- 080-22537481
- 7760991190
- 7760979980
- 7760991086
- 7760991348
- 7892529634
- 7760576556
Thank You ❤️
ಇದು ಸರಕಾರಿ( ಗೌವರಮೆಟ್) ನೌಕರಿ ಸರ್/ಮೇಡಂ